- ಕೃಷಿ ಸುದ್ದಿ
- September 29, 2022
- No Comment
- 2070
ಅಕ್ರಮ ಸಕ್ರಮಕ್ಕೆ ಮೂಗುದಾರ ತೊಡಿಸಲು ಸರ್ಕಾರದ ಚಿಂತನೆ – ಏಳು ದಿನದ ಒಳಗೆ ಕೃಷಿ ಜಮೀನಿನ ಭೂ ಪರಿವರ್ತನೆ ವಿಧೇಯಕ ಅಂಗೀಕಾರಕ್ಕೆ ಸುಗ್ರೀವಾಜ್ಞೆ : ವಿಧೇಯಕದ ಹೈಲೈಟ್ಸ್ ಇಲ್ಲಿದೆ..

ಕೃಷಿ ಲೋಕ : ಕೃಷಿ ಭೂಮಿಯನ್ನು ಕೃಷಿಯೇತರ ಉದ್ದೇಶಗಳಿಗೆ ಬಳಸಿಕೊಳ್ಳಲು ಅವಕಾಶ ಕಲ್ಪಿಸುವ ಭೂಪರಿವರ್ತನೆ ತಿದ್ದುಪಡಿ ಮಸೂದೆಯನ್ನು ಸುಗ್ರೀವಾಜ್ಞೆಯ ಮೂಲಕ ಜಾರಿಗೊಳಿಸಲು ನಿರ್ಧರಿಸಲಾಗಿದೆ’ ಎಂದು ಕಂದಾಯ ಸಚಿವ ಆರ್.ಅಶೋಕ ಹೇಳಿದ್ದಾರೆ.
ರಾಜ್ಯದಲ್ಲಿರುವ ಲಕ್ಷಾಂತರ ಕಂದಾಯ ನಿವೇಶನಗಳನ್ನು ಭೂಪರಿವರ್ತನೆ ವ್ಯಾಪ್ತಿಗೆ ತರಲು ಉದ್ದೇಶಿಸಲಾಗಿದೆ. ಕರ್ನಾಟಕ ಭೂ ಕಂದಾಯ ಕಾಯ್ದೆ 1964ರ ಸೆಕ್ಷನ್ 95 ಕ್ಕೆ ತಿದ್ದುಪಡಿಯಿಂದ ಪರಿವರ್ತನೆಗಿದ್ದ ಅಡ್ಡಿ ಆತಂಕಗಳು ನಿವಾರಣೆಗೊಳ್ಳಲಿವೆ ಎಂದು ಅವರು ಬುಧವಾರ ಸುದ್ದಿಗಾರರಿಗೆ ತಿಳಿಸಿದರು.
ಇತ್ತೀಚೆಗೆ ನಡೆದ ಅಧಿವೇಶನದಲ್ಲಿ ಮಸೂದೆಗೆ ಅಂಗೀಕಾರ ಪಡೆಯಲು ಸಾಧ್ಯವಾಗಿಲ್ಲ. ಆದ್ದರಿಂದ ಸುಗ್ರೀವಾಜ್ಞೆ ಹೊರಡಿಸಲು ನಿರ್ಧರಿಸಲಾಗಿದೆ ಎಂದರು.
ಕೃಷಿ ಭೂಮಿಯನ್ನು ಕೃಷಿಯೇತರ ಉದ್ದೇಶಗಳಿಗೆ ಭೂಪರಿವರ್ತನೆ ಮಾಡಿಸಿಕೊಳ್ಳಲು ಅರ್ಜಿ ನೀಡಿದ 7 ದಿನಗಳಲ್ಲಿ ಅರ್ಜಿಯನ್ನು ಇತ್ಯರ್ಥಗೊಳಿಸಲಾಗುವುದು. ಗ್ರಾಮೀಣ ಪ್ರದೇಶದಲ್ಲಿ ಪರಿವರ್ತನೆಗೆ ಅರ್ಜಿ ಸಲ್ಲಿಸಿದ 30 ದಿನಗಳಲ್ಲಿ ಅವರ ಉದ್ದೇಶಗಳಿಗೆ ಅನುಮತಿ ಸಿಗಲಿದೆ
ಎಂದು ಅವರು ಹೇಳಿದರು.
ಅರ್ಜಿ ಸಲ್ಲಿಸಿದ ವಾರದ ಕಾಲಮಿತಿಯೊಳಗೆ ಕೃಷಿ ಭೂಮಿಯನ್ನು ಕೃಷಿಯೇತರ ಉದ್ದೇಶಕ್ಕೆ ಭೂಪರಿವರ್ತನೆಗೆ ಅವಕಾಶ ಕಲ್ಪಿಸುವ ಪಾರದರ್ಶಕ, ಜನಸ್ನೇಹಿ ಸರಳ ವ್ಯವಸ್ಥೆಯನ್ನು ಜಾರಿ ಮಾಡಲಾಗುತ್ತಿದೆ. ಮಸೂದೆಯು ಮಾಸ್ಟರ್ ಪ್ಲಾನ್ ಅಥವಾ ನಗರ ಯೋಜನಾ ಪ್ರಾಧಿಕಾರದ ಮಂಜೂರಾತಿ ಅನ್ವಯ ಕೃಷಿ ಭೂಮಿ ಅಥವಾ ಅದರ ಭಾಗವನ್ನು ಯಾವುದಾದರೂ ಇತರ ಉದ್ದೇಶಕ್ಕೆ ಬಳಸಲು ಇಚ್ಛಿಸುವವರು ನಿಗದಿಪಡಿಸಿದ ದಂಡ ಪಾವತಿಸಿ ಪ್ರಮಾಣಪತ್ರ ಸಹಿತ ಜಿಲ್ಲಾಧಿಕಾರಿಗೆ ಅರ್ಜಿ ಸಲ್ಲಿಸಬೇಕು.
ಈ ಸಂಬಂಧ ಕಾನೂನು ತಿದ್ದುಪಡಿ ವಿಧೇಯಕ ಸಿದ್ಧವಾಗಿದ್ದು, ಸುಗ್ರೀವಾಜ್ಞೆ ಮೂಲಕ ಜಾರಿ ಮಾಡಲು ತೀರ್ಮಾನಿಸಲಾಗಿದೆ. ಇದರಲ್ಲಿ ಅನಧಿಕೃತ ಮನೆ, ನಿವೇಶನಗಳ ಮಾಲೀಕರೂ ಭೂ ಪರಿವರ್ತನೆಗಾಗಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸುವುದು ಸರ್ಕಾರದ ಉದ್ದೇಶ. ಹೀಗೆ ಸಲ್ಲಿಕೆಯಾದ ಅರ್ಜಿಗಳಿಗೆ ಏಳು ದಿನಗಳ ಒಳಗೆ ಜಿಲ್ಲಾಧಿಕಾರಿ ಮಂಜೂರಾತಿ ಆದೇಶ ಹೊರಡಿಸಬೇಕು. 15 ದಿನ ಕಳೆದರೂ ಜಿಲ್ಲಾಧಿಕಾರಿ ಅರ್ಜಿಗಳನ್ನು ವಿಲೇವಾರಿ ಮಾಡದಿದ್ದರೆ, ಕೃಷಿಯೇತರ ಭೂಮಿಯಾಗಿ ಪರಿವರ್ತನೆ ಆಗಿದೆ ಎಂದು ಪರಿಭಾವಿಸಿಕೊಳ್ಳಬಹುದು’ ಎಂದು ಅಂಶ ತಿದ್ದುಪಡಿ ಮಸೂದೆಯಲ್ಲಿದೆ. ಸುಗ್ರೀವಾಜ್ಞೆ ಮೂಲಕ ದೀಪಾವಳಿ ವೇಳೆಗೆ ಸಿಹಿ ಸುದ್ದಿ ನೀಡಲಾಗುವುದು ಎಂದು ಕಂದಾಯ ಸಚಿವ ಅಶೋಕ್ ಹೇಳಿದ್ದಾರೆ.
ಮಸೂದೆಯ ಮುಖ್ಯ ಅಂಶಗಳು ಹೀಗಿದೆ
ಮಹಾ ಯೋಜನೆ (ಮಾಸ್ಟರ್ ಪ್ಲಾನ್) ಅಥವಾ ನಗರ ಯೋಜನಾ ಪ್ರಾಧಿಕಾರದ ಮಂಜೂರಾತಿ ಅನ್ವಯ ಕೃಷಿ ಭೂಮಿ ಅಥವಾ ಅದರ ಭಾಗವನ್ನು ಯಾವುದಾದರೂ ಇತರ ಉದ್ದೇಶಕ್ಕೆ ಬಳಸಲು ಇಚ್ಚಿಸುವವರು ನಿಗದಿಪಡಿಸಿದ ದಂಡ ಪಾವತಿಸಿ ಪ್ರಮಾಣಪತ್ರ ಸಹಿತ ಜಿಲ್ಲಾಧಿಕಾರಿಗೆ ಅರ್ಜಿ ಸಲ್ಲಿಸಬೇಕು.
ಹೀಗೆ ಸಲ್ಲಿಕೆಯಾದ ಅರ್ಜಿಗಳಿಗೆ ಏಳು ದಿನಗಳ ಒಳಗೆ ಜಿಲ್ಲಾಧಿಕಾರಿ ಮಂಜೂರಾತಿ ಆದೇಶ ಹೊರಡಿಸಬೇಕು. 15 ದಿನ ಕಳೆದರೂ ಜಿಲ್ಲಾಧಿಕಾರಿ ಅರ್ಜಿಗಳನ್ನು ವಿಲೇವಾರಿ ಮಾಡದಿದ್ದರೆ, ಕೃಷಿಯೇತರ ಭೂಮಿಯಾಗಿ ಪರಿವರ್ತನೆ ಆಗಿದೆ ಎಂದು ಪರಿಭಾವಿಸಿಕೊಳ್ಳಬಹುದು’ ಎಂದು ಅಂಶ ತಿದ್ದುಪಡಿಯಾದ ಮಸೂದೆಯಲ್ಲಿದೆ.
ರಾಜ್ಯ ಸರಕಾರ ಆಸ್ತಿ ನೋಂದಣಿಗಾಗಿ ಹೊಸದಾಗಿ ಜಾರಿ ಮಾಡುತ್ತಿರುವ ಕಾವೇರಿ -2 ತಂತ್ರಾಂಶದಲ್ಲಿ ಭೂ ದಾಖಲೆಗಳ ವಿವರ ಸಿಗಲಿದೆ. ಜಿಲ್ಲಾಧಿಕಾರಿಯು ಭೂ ಪರಿವರ್ತನೆ ಕೋರಿಕೆಯನ್ನು ಅನುಮೋದಿಸುವ ವೇಳೆ ಸಂಬಂಧಿತ ಆಸ್ತಿಯ ಸರ್ವೇ ನಂಬರ್ ಪರಿಶೀಲಿಸಿದರೆ ಎಲ್ಲ ವಿವರ ಸಿಗಲಿದೆ ಎಂದು ತಿಳಿಸಿದ್ದಾರೆ.