- ಕೃಷಿ ಸುದ್ದಿಹೈನುಗಾರಿಕೆ
- March 23, 2022
- No Comment
- 2364
ದಕ್ಷಿಣ ಕನ್ನಡ ಜಿಲ್ಲಾ ಹಾಲು ಒಕ್ಕೂಟದ ಉಪಾಧ್ಯಕ್ಷರಾಗಿ ಪುತ್ತೂರಿನ ಎಸ್ ಜಯರಾಮ್ ರೈ ಬಳಜ್ಜ ಆಯ್ಕೆ

ಕೃಷಿ ಲೋಕ: ದಕ್ಷಿಣ ಕನ್ನಡ ಜಿಲ್ಲಾ ಹಾಲು ಒಕ್ಕೂಟದ ಉಪಾಧ್ಯಕ್ಷರಾಗಿ ಪುತ್ತೂರಿನ ಎಸ್ ಜಯರಾಮ್ ರೈ ಬಳಜ್ಜ ಆಯ್ಕೆಯಾಗಿದ್ದಾರೆ. ಇತ್ತೀಚಿಗಷ್ಟೇ ದಕ್ಷಿಣ ಕನ್ನಡ ಜಿಲ್ಲಾ ಹಾಲು ಒಕ್ಕೂಟದ ಅಧ್ಯಕ್ಷ ರವಿರಾಜ್ ಹೆಗ್ಡೆ ಹಾಗೂ ಉಪಾಧ್ಯಕ್ಷ ಪ್ರಕಾಶ್ಚಂದ್ರ ಶೆಟ್ಟಿ ಕುಂದಾಪುರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರಿಂದ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನ ತೆರವಾಗಿತ್ತು.

ಇದೀಗ ಉಪಾಧ್ಯಕ್ಷ ಸ್ಥಾನಕ್ಕೆ ಕೆಯ್ಯೂರು ಹಾಲು ಉತ್ಪಾದಕ ಸಹಕಾರ ಸಂಘದ ಅಧ್ಯಕ್ಷ ಎಸ್ ಜಯರಾಮ್ ರೈ ಒಮ್ಮತದಿಂದ ಆಯ್ಕೆಯಾಗಿದ್ದಾರೆ.
ಮಂಗಳೂರಿನ ಕುಲಶೇಖರದಲ್ಲಿರುವ ಕೆ. ಎಂ. ಎಫ್ ಕಚೇರಿಯಲ್ಲಿ ಮಾರ್ಚ್ 23 ರಂದು ಚುನಾವಣಾ ಪ್ರಕ್ರಿಯೆ ನಡೆಯಿತು. ಚುನಾವಣಾಧಿಕಾರಿಯಾಗಿದ್ದ ಸಚಿನ್ ಕುಮಾರ್ ರವರು ಆಯ್ಕೆ ಪ್ರಕ್ರಿಯೆ ನಡೆಸಿಕೊಟ್ಟರು, ಈ ಸಂದರ್ಭದಲ್ಲಿ ಕೆ. ಎಂ. ಎಫ್ ನ ನಿರ್ದೇಶಕರು ಉಪಸ್ಥಿತರಿದ್ದರು.