ಇನ್ಮುಂದೆ ಖಾಸಗಿ ಜಮೀನಿನಲ್ಲೂ ಶ್ರೀಗಂಧ ಬೆಳೆಯಲು ಅವಕಾಶ ‌- ರಾಜ್ಯ ಸರ್ಕಾರದ ಮಹತ್ವದ ನಿರ್ಧಾರ, ನಿಯಮಗಳೇನು ಗೊತ್ತಾ…!?

ಇನ್ಮುಂದೆ ಖಾಸಗಿ ಜಮೀನಿನಲ್ಲೂ ಶ್ರೀಗಂಧ ಬೆಳೆಯಲು ಅವಕಾಶ ‌- ರಾಜ್ಯ ಸರ್ಕಾರದ ಮಹತ್ವದ ನಿರ್ಧಾರ, ನಿಯಮಗಳೇನು ಗೊತ್ತಾ…!?

ಕೃಷಿ ಲೋಕ : ರಾಜ್ಯ ಸರ್ಕಾರ ಬಜೆಟ್ ನಲ್ಲಿ ಘೋಷಿಸಿದಂತೆ ಕರ್ನಾಟಕ ರಾಜ್ಯ ಶ್ರೀಗಂಧ ನೀತಿ-2022ಕ್ಕೆ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ಸಿಕ್ಕಿದ್ದು ಇನ್ನು ಮುಂದೆ ರೈತರು ತಮ್ಮ ಖಾಸಗಿ ಜಮೀನಿನಲ್ಲಿ ಶ್ರೀಗಂಧ ಬೆಳೆಯಲು ಇದು ಅನುವು ಮಾಡಿಕೊಡುತ್ತದೆ.

ಕಳೆದ ತಿಂಗಳು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಂಡಿದ್ದು, ಇದರಿಂದ ರೈತರು ಖಾಸಗಿ ಜಮೀನಿನಲ್ಲಿ ಶ್ರೀಗಂಧವನ್ನು ಬೆಳೆಸಿ ಮುಕ್ತ ಮಾರುಕಟ್ಟೆಯಲ್ಲಿ ಮಾರಾಟ ಮಾಡಲು ಅವಕಾಶ ಸಿಗಲಿದೆ ಎಂದರು.

ಬಸವರಾಜ ಬೊಮ್ಮಾಯಿ ನೇತೃತ್ವದ ಸಚಿವ ಸಂಪುಟ ಸಭೆಯಲ್ಲಿ ಕರ್ನಾಟಕ ರಾಜ್ಯ ಶ್ರೀಗಂಧ ನೀತಿ 2022ಕ್ಕೆ ಅನುಮೋದನೆ ನೀಡಿದ್ದು, ಸರ್ಕಾರವು ಶೀಘ್ರದಲ್ಲೇ ಜಾರಿಗೆ ತರಲು ಉದ್ದೇಶಿಸಿದೆ.

ಈ ನೀತಿಯು ಶ್ರೀಗಂಧ ಬೆಳೆಯಲು ಇರುವ ಎಲ್ಲಾ ನಿರ್ಬಂಧಗಳನ್ನು ತೆಗೆದುಹಾಕಲಿದ್ದು, ಇನ್ಮುಂದೆ ಜನರು ಖಾಸಗಿ ಭೂಮಿಯಲ್ಲಿ ಶ್ರೀಗಂಧವನ್ನು ಬೆಳೆಯಲು ಮತ್ತು ಮುಕ್ತ ಮಾರುಕಟ್ಟೆಯಲ್ಲಿ ಮಾರಾಟ ಮಾಡಲು ಅವಕಾಶವಿದೆ ಎಂದು ತಿಳಿಸಿದ್ದಾರೆ. ಪ್ರಸ್ತುತ, ಶ್ರೀಗಂಧವನ್ನು ಬೆಳೆಯಲು, ರೈತರು ವ್ಯಾಪ್ತಿಯ ಅರಣ್ಯ ಕಚೇರಿಗಳಲ್ಲಿ ನೋಂದಾಯಿಸಿಕೊಳ್ಳಬೇಕಿದ್ದು, ರೈತರು ತಾವು ನೆಡಲು ಉದ್ದೇಶಿಸಿರುವ ಸಸಿಗಳ ಸಂಖ್ಯೆಯ ವಿವರಗಳನ್ನು ನೀಡಬೇಕು ಮತ್ತು ಮರಗಳನ್ನು ಕಡಿಯಲು ಇಲಾಖೆಯಿಂದ ಅನುಮತಿ ಪಡೆಯಬೇಕು.

ಅರಣ್ಯ ಇಲಾಖೆ ನಡೆಸುವ ಡಿಪೋಗಳಲ್ಲಿ ಮಾತ್ರ ಶ್ರೀಗಂಧದ ಮರದ ದಿಮ್ಮಿಗಳನ್ನು ಮಾರಾಟ ಮಾಡಲು ರೈತರಿಗೆ ಅವಕಾಶವಿದ್ದು, ಸಭೆಯ ನಂತರ ಸುದ್ದಿಗಾರರಿಗೆ ಮಾಹಿತಿ ನೀಡಿದ ಆರೋಗ್ಯ ಸಚಿವ ಕೆ. ಸುಧಾಕರ್, ಶ್ರೀಗಂಧಕ್ಕೆ ದೇಶೀಯ ಮತ್ತು ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಹೆಚ್ಚಿನ ಬೇಡಿಕೆಯಿದೆ. ಶ್ರೀಗಂಧದ ಎಣ್ಣೆಯನ್ನು ಬಳಸಿ ಸಾಬೂನು ಮತ್ತು ಸೌಂದರ್ಯವರ್ಧಕ ಉತ್ಪನ್ನಗಳನ್ನು ತಯಾರಿಸುವ ಸರ್ಕಾರಿ ಸ್ವಾಮ್ಯದ ಕರ್ನಾಟಕ ಸೋಪ್ಸ್ ಮತ್ತು ಡಿಟರ್ಜೆಂಟ್ಸ್ ಲಿಮಿಟೆಡ್ ಕೂಡ ಆಸ್ಟ್ರೇಲಿಯಾದಿಂದ ಮರವನ್ನು ಆಮದು ಮಾಡಿಕೊಳ್ಳುತ್ತಿದೆ ಎಂದು ಮಾಹಿತಿ ನೀಡಿದ್ದಾರೆ.

ಇನ್ನೂ ದೇಶ ಮತ್ತು ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಶ್ರೀಗಂಧಕ್ಕೆ ವ್ಯಾಪಕ ಬೇಡಿಕೆ ಇದೆ. ಶ್ರೀಗಂಧವನ್ನು ಬೆಳೆಸುವ ರೈತರಿಗೆ ಮಾರ್ಗದರ್ಶನ ಮತ್ತು ಪ್ರೋತ್ಸಾಹ ನೀಡುವುದರ ಜತೆಗೆ, ಗಂಧದ ಮರಕ್ಕೆ ಚಿಪ್‌ ಅಳವಡಿಸಿ ಕಳ್ಳತನ ಆಗುವುದನ್ನು ತಡೆಯಲು ಸರ್ಕಾರ ಕ್ರಮ ಕೈಗೊಳ್ಳಲಿದೆ. ಈ ಕ್ರಮದಿಂದಾಗಿ ರೈತರ ಆದಾಯವೂ ಹೆಚ್ಚಾಗಲಿದೆ ಎಂದರು.

Related post

ಯುವಕರೇ ಗಮನಿಸಿ‌ : ಕಡಿಮೆ ಬಂಡವಾಳವಿದ್ರೂ ಈ ಕೃಷಿ ಉದ್ಯಮಗಳಿಂದ ಲಕ್ಷಗಟ್ಟಲೆ ಲಾಭ ಗಳಿಸಬಹುದು – ಟಾಪ್ 10 ಉದ್ಯಮಗಳ ಮಾಹಿತಿ ಇಲ್ಲಿವೆ ನೋಡಿ…

ಯುವಕರೇ ಗಮನಿಸಿ‌ : ಕಡಿಮೆ ಬಂಡವಾಳವಿದ್ರೂ ಈ ಕೃಷಿ ಉದ್ಯಮಗಳಿಂದ ಲಕ್ಷಗಟ್ಟಲೆ…

ನ್ಯೂಸ್ ಆ್ಯರೋ : ಯಾವುದೇ ಲಾಭದಾಯಕ ವ್ಯವಹಾರ ಮಾಡುವುದರಿಂದ ಹಣಕಾಸಿನ ಸಮಸ್ಯೆಗಳನ್ನು ದೂರ ಮಾಡಬಹುದು. ಆದರೆ ವ್ಯಾಪಾರ ಕೈಹಿಡಿಯುವುದು ತುಂಬಾನೇ ಕಷ್ಟ.…
ಅಡಿಕೆ ಬೆಳೆಗಾರರಿಗೆ ಸುಗ್ಗಿ, ಹೊಸ ಅಡಿಕೆಗೆ ಹೆಚ್ಚಿದ ಬೇಡಿಕೆ – ಹೊಸ ಅಡಿಕೆ ದರ ಇನ್ನಷ್ಟು ಏರುವ ನಿರೀಕ್ಷೆ..!!

ಅಡಿಕೆ ಬೆಳೆಗಾರರಿಗೆ ಸುಗ್ಗಿ, ಹೊಸ ಅಡಿಕೆಗೆ ಹೆಚ್ಚಿದ ಬೇಡಿಕೆ – ಹೊಸ…

ನ್ಯೂಸ್ ಆ್ಯರೋ‌ : ಉತ್ತರ ಭಾರತದ ಅಡಿಕೆ ವ್ಯಾಪಾರಿಗಳು ದರ ನೋಡಿ ಖರೀದಿಸುತ್ತಿದ್ದು, ಹಳೆ ಅಡಿಕೆ ಬದಲು ಹೊಸ ಅಡಿಕೆಯತ್ತ ಮುಖ…

Leave a Reply

Your email address will not be published. Required fields are marked *