- ಕೃಷಿ ಸುದ್ದಿ
- September 27, 2022
- No Comment
- 577
ರಾಜ್ಯದ ರೈತರಿಗೆ ಇಂಧನ ಸಚಿವ ಸುನಿಲ್ ಕುಮಾರ್ ಗುಡ್ ನ್ಯೂಸ್ – ಏನದು ಗೊತ್ತಾ…!?

ಕೃಷಿ ಲೋಕ : ರಾಜ್ಯ ಇಂಧನ ಸಚಿವರು ರಾಜ್ಯದ ರೈತರಿಗೆ ಗುಡ್ ನ್ಯೂಸ್ ಒಂದನ್ನು ಕೊಟ್ಟಿದ್ದಾರೆ. ರೈತರಿಗೆ 7 ಗಂಟೆಗಳ ಕಾಲ ವಿದ್ಯುತ್ ನೀಡುವುದು ಪಕ್ಕಾ, ಇದರಲ್ಲಿ ಎರೆಡು ಮಾತಿಲ್ಲ ಎಂದು ಇಂಧನ ಸಚಿವ ಸುನಿಲ್ ಕುಮಾರ್ ಸ್ಪಷ್ಟನೆ ನೀಡಿದ್ದಾರೆ. ಅವರು ಮೈಸೂರಿನಲ್ಲಿ ವಿದ್ಯುತ್ ದೀಪಾಲಂಕಾರಕ್ಕೆ ಚಾಲನೆ ನೀಡಿದ ಬಳಿಕ ಮಾಧ್ಯಮಗಳೊಂದಿಗೆ ಈ ಬಗ್ಗೆ ತಿಳಿಸಿದ್ದಾರೆ.
ಬಿಜೆಪಿ ಸರ್ಕಾರ ಬಂದ ಮೇಲೆ 6 ಲಕ್ಷ ರೈತರಿಗೆ ಹೊಸದಾಗಿ ವಿದ್ಯುತ್ ಸಂಪರ್ಕ ನೀಡಲಾಗಿದೆ. ಮತ್ತೆ ಹೊಸದಾಗಿ ಐಪಿ ಸೆಕ್ಟರ್ಗಳಿಗೆ ವಿದ್ಯುತ್ ಸಂಪರ್ಕ ನೀಡುವುದರ ಕುರಿತು ಚರ್ಚಿಸಲಾಗಿದೆ ಎಂದರು.
ಇನ್ನೇನು ಮಳೆಗಾಲ ಮುಗಿದು ಬೇಸಿಗೆ ಕಾಲ ಆರಂಭವಾಗಿದೆ. ಇನ್ನು ಕೃಷಿಗೆ ಹೆಚ್ಚು ನೀರಿನ ಅವಶ್ಯಕತೆ ಇದ್ದು ಸರ್ಕಾರ ರೈತರ ಪಂಪ್ ಸೆಟ್ ಗಳಿಗೆ ದಿನದಲ್ಲಿ 7 ಗಂಟೆಗಳ ಕಾಲ ವಿದ್ಯುತ್ ನೀಡುವುದಾಗಿ ತಿಳಿಸಿದ್ದು ರೈತರು ನಿಟ್ಟುಸಿರು ಬಿಡುವಂತೆ ಮಾಡಿದೆ.
ರೈತರಿಗೆ ಹಗಲು ಹೊತ್ತಿನಲ್ಲೇ ವಿದ್ಯುತ್ ನೀಡಿದರೆ ಹೆಚ್ಚು ಅನುಕೂಲಗಾಗುತ್ತದೆ ರಾತ್ರಿ ಹೊತ್ತು ಪಂಪ್ ಸೆಟ್ ಆನ್ ಮಾಡಲು ಹೋಗಿ ಅದೆಷ್ಟೋ ರೈತರು ಹಾವು ಚೇಳುಗಳಿಂದ ಕಚ್ಚಿಸಿಕೊಂಡ ಉದಾಹರಣೆಗಳಿವೆ. ಅಲ್ಲದೆ ರಾತ್ರಿ ಇಡೀ ನೀರು ಬಿಡುವ ಸಲುವಾಗಿ ರೈತರು ಜಾಗರಣೆ ಮಾಡಬೇಕಾದ ಪರಿಸ್ಥಿತಿ ಇದ್ದು ಹಗಲು ಹೊತ್ತಲ್ಲೇ ವಿದ್ಯುತ್ ನೀಡಬೇಕೆಂದು ರೈತರು ಒತ್ತಾಯಿಸಿದ್ದಾರೆ.