ಬೇಸಿಗೆಯಲ್ಲಿ ಜಾನುವಾರುಗಳ ಸಂರಕ್ಷಣೆಗೆ ಇಲ್ಲಿವೆ ಅಮೂಲ್ಯ ಸಲಹೆಗಳು

ಬೇಸಿಗೆಯಲ್ಲಿ ಜಾನುವಾರುಗಳ ಸಂರಕ್ಷಣೆಗೆ ಇಲ್ಲಿವೆ ಅಮೂಲ್ಯ ಸಲಹೆಗಳು

ಕೃಷಿಲೋಕ : ಪಶುಸಂಗೋಪನೆಯಲ್ಲಿ ಹಲವಾರು ರೈತರು ತೊಡಗಿದ್ದಾರೆ. ಕೃಷಿಯು ಒಂದು ಕಡೆ ಜೀವನಕ್ಕೆ ಆಧಾರವಾದರೆ ಅದರ ಜೊತೆಗೆ ಹೈನುಗಾರಿಕೆಯು ರೈತರಿಗೆ ಆದಾಯದ ಮೂಲವಾಗಿದೆ. ಬೇಸಿಗೆಯ ಸಮಯದಲ್ಲಿ ಜಾನುವಾರುಗಳ ಆರೋಗ್ಯ ರಕ್ಷಣೆ ಹಾಗೂ ಹಾಲಿನ ಇಳುವರಿ ಬಗ್ಗೆ ರೈತರು ಹೆಚ್ಚಿನ ಗಮನಹರಿಸಲೇಬೇಕು. ಈ ಕುರಿತಂತೆ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯಿಂದ ರೈತರಿಗೆ ಸಲಹೆಗಳನ್ನು ನೀಡಿದೆ.

ಮಾರ್ಚ್ ತಿಂಗಳಿನಲ್ಲಿಯೇ ಬಿಸಿಲಿನ ತಾಪ ಹೆಚ್ಚಾಗಿದ್ದು ದನ ಮಾತ್ರವಲ್ಲದೆ ಕುರಿ, ಎಮ್ಮೆಗಳ ರಕ್ಷಣೆಗೆ ಸಹ ಸಲಹೆಗಳನ್ನು ಕೊಡಲಾಗಿದೆ.

  • ಜಾನುವಾರುಗಳನ್ನು ಮುಂಜಾನೆ ಮತ್ತು ಸಾಯಂಕಾಲದ ಸಮಯದಲ್ಲಿ ಮೇಯಿಸಲು ಬಿಡಬೇಕು.
  • ದಿನಕ್ಕೆ 2 ರಿಂದ 3 ಬಾರಿ ಶುದ್ದವಾದ ನೀರನ್ನು ಕುಡಿಸಬೇಕು.
  • ಮಧ್ಯಾಹ್ನದ ಸಮಯದಲ್ಲಿ ಜಾನುವಾರುಗಳನ್ನು ಕೊಟ್ಟಿಗೆಯಲ್ಲಿ ಅಥವಾ ಗಿಡದ ನೆರಳಿನಲ್ಲಿ ಕಟ್ಟಬೇಕು.
  • ಜಾನುವಾರುಗಳಿಗೆ ದಿನದಲ್ಲಿ 1 ರಿಂದ 2 ಸಾರಿ ಮೈ ತೊಳೆಯಬೇಕು ಹಾಗೂ ಮಿಶ್ರ ತಳಿ ರಾಸು/ ಎಮ್ಮೆಗಳಲ್ಲಿ ದೇಹದ ಉಷ್ಣತೆ ಕಾಪಾಡಲು ಗೋಣಿಚೀಲವನ್ನು ನೀರಿನಲ್ಲಿ ತೋಯಿಸಿ ಮೈ ಮೇಲೆ ಹಾಕಬೇಕು.
  • ದನದ ಕೊಟ್ಟಿಗೆಯನ್ನು ತಂಪಾಗಿ ಇಡಲು ಕೊಟ್ಟಿಗೆಯ ಮೇಲೆ ತೆಂಗಿನ ಗರಿ/ ಹುಲ್ಲನ್ನು ಹಾಕಿ, ಕಿಟಕಿಗಳಿಗೆ ಗೋಣಿ ಚೀಲಗಳನ್ನು ಕಟ್ಟಿ ನೀರನ್ನು ಸಿಂಪಡಿಸುತ್ತಿರಬೇಕು.
  • ಜಮೀನು ಉಳುಮೆ ಮಾಡಲು ಎತ್ತುಗಳನ್ನು ಮುಂಜಾನೆ ಅಥವಾ ಸಾಯಂಕಾಲದ ಸಮಯದಲ್ಲಿ ಮಾತ್ರ ಕೆಲಸಕ್ಕೆ ಉಪಯೋಗಿಸಬೇಕು.

ದನದ ಜೊತೆಗೆ ಕುರಿ ಮತ್ತು ಆಡುಗಳನ್ನು ಸಹ ತಂಪಾದ ಸಮಯದಲ್ಲಿ ಮೇಯಿಸಿ ಮಧ್ಯಾಹ್ನದಲ್ಲಿ ಗಿಡದ ನೆರಳಿನಲ್ಲಿ ನಿಲ್ಲಿಸಬೇಕು. ವಲಸೆ ಕುರಿಗಳಿದ್ದರೆ ಮುಂಜಾನೆ ಅಥವಾ ಸಾಯಂಕಾಲದ ಸಮಯದಲ್ಲಿ ಹೊಡೆದುಕೊಂಡು ಹೋಗಬೇಕು. ಕರು, ಕುರಿ/ ಮೇಕೆ ಮರಿಗಳಿಗೆ ಸರಿಯಾಗಿ ಹಾಲನ್ನು ಕುಡಿಸಬೇಕು ಹಾಗೂ ನೀರನ್ನು ಕುಡಿಸಬೇಕು.

ಹೈನು ಜಾನುವಾರುಗಳಿಗೆ ಸಾಧ್ಯವಾದಷ್ಟು ಪೌಷ್ಠಿಕ ಆಹಾರ ಹಾಗೂ ಲಭ್ಯವಿರುವ ಹಸಿರು ಮೇವನ್ನು ಕೊಡಬೇಕು. ಪೌಷ್ಠಿಕ ಆಹಾರ ಅಥವಾ ಕುಡಿಯುವ ನೀರಿನಲ್ಲಿ ಲವಣ ಮಿಶ್ರಣ, ಉಪ್ಪು ಹಾಗೂ ಬೆಲ್ಲವನ್ನು ನಿಗದಿತ ಪ್ರಮಾಣದಲ್ಲಿ ಕೊಡಬೇಕು.

ಮೇವಿನ ಮರಗಳನ್ನು ಬೆಳೆಸುವುದರಿಂದ ಜಾನುವಾರುಗಳಿಗೆ ತಂಪಾದ ನೆರಳು ಹಾಗೂ ಪೌಷ್ಠಿಕ ಆಹಾರವಾಗಿ ಹಸಿರು ಸೊಪ್ಪು ತಿನ್ನಿಸಲು ಅನುಕೂಲವಾಗುತ್ತದೆ. ಜಾನುವಾರುಗಳಿಗೆ ಇಲಾಖೆಯಿಂದ ಉಚಿತವಾಗಿ ನೀಡುವ ಸಾಂಕ್ರಾಮಿಕ ರೋಗಗಳ ಲಸಿಕೆಗಳನ್ನು ಕಾಲಕಾಲಕ್ಕೆ ಹಾಕಿಸಬೇಕು.

ಜಂತುನಾಶಕ ಔಷಧಿಯನ್ನು ವರ್ಷದಲ್ಲಿ 2 ರಿಂದ 3 ಸಾರಿ ಕೊಡಿಸಬೇಕು. ಕಾಯಿಲೆಯಿಂದ ಬಳಲುವ ಜಾನುವಾರುಗಳಿಗೆ ಚಿಕಿತ್ಸೆ ಕೊಡಿಸಬೇಕು.

ಇನ್ನು ನಿರ್ಜಲೀಕರಣಗೊಂಡ ಜಾನುವಾರುಗಳಿಗೆ ಉಪ್ಪು, ಅಡುಗೆ ಸೋಡಾ, ಬೆಲ್ಲ ಹಾಗೂ ಲಿಂಬೆಹಣ್ಣಿನ ರಸವನ್ನು ನೀರಿನಲ್ಲಿ ಮಿಶ್ರಣ ಮಾಡಿ ದಿನದಲ್ಲಿ 3 ರಿಂದ 4 ಸಾರಿ ಕುಡಿಸಬೇಕು. ರೈತರು ತಮ್ಮ ಜಮೀನಿನಲ್ಲಿರುವ ಮೇವನ್ನು ಯಾವುದೇ ಕಾರಣಕ್ಕೂ ಸುಟ್ಟು ಹಾಕದೆ ಮೇವನ್ನು ಸಂಗ್ರಹಿಸಬೇಕು. ಇದರಿಂದ ಭೂಮಿಯ ಫಲವತ್ತತೆ ಹಾಳಾಗದಂತೆ ತಡೆಯುವುದರ ಜೊತೆಗೆ ವಾಯುಮಾಲಿನ್ಯ ನಿಯಂತ್ರಣ ಮತ್ತು ಜಾನುವಾರುಗಳಿಗೆ ಮೇವಿನ ಕೊರತೆಯನ್ನು ನೀಗಿಸಬಹುದು.

Related post

ಯುವಕರೇ ಗಮನಿಸಿ‌ : ಕಡಿಮೆ ಬಂಡವಾಳವಿದ್ರೂ ಈ ಕೃಷಿ ಉದ್ಯಮಗಳಿಂದ ಲಕ್ಷಗಟ್ಟಲೆ ಲಾಭ ಗಳಿಸಬಹುದು – ಟಾಪ್ 10 ಉದ್ಯಮಗಳ ಮಾಹಿತಿ ಇಲ್ಲಿವೆ ನೋಡಿ…

ಯುವಕರೇ ಗಮನಿಸಿ‌ : ಕಡಿಮೆ ಬಂಡವಾಳವಿದ್ರೂ ಈ ಕೃಷಿ ಉದ್ಯಮಗಳಿಂದ ಲಕ್ಷಗಟ್ಟಲೆ…

ನ್ಯೂಸ್ ಆ್ಯರೋ : ಯಾವುದೇ ಲಾಭದಾಯಕ ವ್ಯವಹಾರ ಮಾಡುವುದರಿಂದ ಹಣಕಾಸಿನ ಸಮಸ್ಯೆಗಳನ್ನು ದೂರ ಮಾಡಬಹುದು. ಆದರೆ ವ್ಯಾಪಾರ ಕೈಹಿಡಿಯುವುದು ತುಂಬಾನೇ ಕಷ್ಟ.…
ಅಡಿಕೆ ಬೆಳೆಗಾರರಿಗೆ ಸುಗ್ಗಿ, ಹೊಸ ಅಡಿಕೆಗೆ ಹೆಚ್ಚಿದ ಬೇಡಿಕೆ – ಹೊಸ ಅಡಿಕೆ ದರ ಇನ್ನಷ್ಟು ಏರುವ ನಿರೀಕ್ಷೆ..!!

ಅಡಿಕೆ ಬೆಳೆಗಾರರಿಗೆ ಸುಗ್ಗಿ, ಹೊಸ ಅಡಿಕೆಗೆ ಹೆಚ್ಚಿದ ಬೇಡಿಕೆ – ಹೊಸ…

ನ್ಯೂಸ್ ಆ್ಯರೋ‌ : ಉತ್ತರ ಭಾರತದ ಅಡಿಕೆ ವ್ಯಾಪಾರಿಗಳು ದರ ನೋಡಿ ಖರೀದಿಸುತ್ತಿದ್ದು, ಹಳೆ ಅಡಿಕೆ ಬದಲು ಹೊಸ ಅಡಿಕೆಯತ್ತ ಮುಖ…

Leave a Reply

Your email address will not be published. Required fields are marked *