- ಸರ್ಕಾರಿ ಯೋಜನೆಗಳು
- September 28, 2022
- No Comment
- 606
ಗಂಗಾ ಕಲ್ಯಾಣ ಯೋಜನೆಯಡಿ ರೈತರಿಗೆ ‘ಉಚಿತ ಕೊಳವೆ ಬಾವಿ ಸೌಲಭ್ಯ’ – ಯೋಜನೆಯ ಲಾಭ ಪಡೆಯಲು ಅರ್ಹತೆಗಳೇನು? ವಿವರ ಇಲ್ಲಿದೆ

ಕೃಷಿ ಲೋಕ : ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ದಿ ನಿಗಮದಿಂದ ಪ್ರಸಕ್ತ ಸಾಲಿನ ವೈಯಕ್ತಿಕ ಗಂಗಾ ಕಲ್ಯಾಣ ಯೋಜನೆಯಡಿ ವೈಯಕ್ತಿಕ ನೀರಾವರಿ ಕೊಳವೆ ಬಾವಿ ನಿರ್ಮಾಣ ಕಾರ್ಯಕ್ಕೆ ಸಹಾಯ ಧನ ಪಡೆಯಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು ಅಕ್ಟೋಬರ್ 20 ಕೊನೆ ದಿನವಾಗಿದೆ. ಹಾಗಿದ್ದರೆ ಗಂಗಾ ಕಲ್ಯಾಣ ಯೋಜನೆ ಎಂದರೇನು..? ಅರ್ಜಿ ಸಲ್ಲಿಕೆ ವಿಧಾನ ಹೇಗೆ? ಈ ಯೋಜನೆಗೆ ಯಾರೆಲ್ಲ ಅರ್ಹರು? ಅಗತ್ಯ ದಾಖಲೆಗಳು ಯಾವುವು? ಈ ಎಲ್ಲ ಮಾಹಿತಿ ಇಲ್ಲಿದೆ.
ಗಂಗಾ ಕಲ್ಯಾಣ ಯೋಜನೆ ಎಂದರೇನು..?
ಗ್ರಾಮೀಣ ಪ್ರದೇಶದಲ್ಲಿ ನೀರಾವರಿ ವ್ಯವಸ್ಥೆ ಇಲ್ಲದ ಸ್ಥಳದಲ್ಲಿ ಕೊಳವೆ ಬಾವಿ ನೀರಾವರಿ ವ್ಯವಸ್ಥೆ ಕಲ್ಪಿಸುವ ಉದ್ದೇಶದೊಂದಿಗೆ ಕರ್ನಾಟಕ ಸರಕಾರ ಗಂಗಾ ಕಲ್ಯಾಣ ಯೋಜನೆ ಜಾರಿಗೆ ತಂದಿದೆ. ಈ ಯೋಜನೆಯಡಿ ಫಲಾನುಭವಿಗಳ ಕೃಷಿ ಭೂಮಿಯಲ್ಲಿ ತಜ್ಞ ಭೂವಿಜ್ಞಾನಿಗಳ ಮೂಲಕ ಗುರುತಿಸಲ್ಪಟ್ಟ ಜಲಬಿಂದು ವ್ಯಾಪ್ತಿಯೊಳಗೆ ಕೊಳವೆಬಾವಿ ಕೊರೆಯಿಸಿ, ನಂತರ ನೀರು ಸಂಗ್ರಹಿಸಲು ಟ್ಯಾಂಕ್‌ನ್ನು ನಿರ್ಮಿಸಿಕೊಟ್ಟು, ಅದಕ್ಕೆ ಅಳವಡಿಸಿದ ಪೈಪ್ ಮೂಲಕ ಕೃಷಿ ಭೂಮಿಗೆ ನೀರನ್ನುಒದಗಿಸಲಾಗುತ್ತದೆ. ಈ ಯೋಜನೆಯು ಸಂಪೂರ್ಣವಾಗಿ ಸಹಾಯಧನ ಯೋಜನೆಯಾಗಿದೆ. ಅಂದರೆ, ಪೂರ್ಣ ವೆಚ್ಚವನ್ನು ಸರಕಾರವೇ ಭರಿಸುತ್ತದೆ.
ಈ ಯೋಜನೆಯಡಿಯಲ್ಲಿ 01 ಎಕರೆ 20 ಗುಂಟೆಯಿಂದ 5 ಎಕರೆ ಭೂಮಿಯನ್ನು ಹೊಂದಿರುವ ಫಲಾನುಭವಿಗೆ ಒಂದು ಕೊಳವೆಬಾವಿ ಕೊರೆಯಿಸಿ ಅದಕ್ಕೆ ನಿಗಮದಿಂದ ಪಂಪ್‌ಸೆಟ್‌ನ್ನು ಅಳವಡಿಸಲಾಗುವುದು. ಪಂಪ್‌ಸೆಟ್ ಮತ್ತು ವಿದ್ಯುದ್ದೀಕರಣ ಸೇರಿ ಒಟ್ಟು ವೆಚ್ಚ ರೂ.1.50 ಲಕ್ಷವಾಗಿದೆ. ಅರ್ಜಿದಾರರು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು.
ವೈಯಕ್ತಿಕ ಕೊಳವೆ ಬಾವಿ ಯೋಜನೆ
ಈ ಯೋಜನೆಗೆ ಸರ್ಕಾರವು ₹2.00ಲಕ್ಷ ನಿಗದಿಪಡಿಸಿದೆ. ಈ ಮೊತ್ತದಲ್ಲಿ ಕೊಳವೆ ಬಾವಿಯ ಕೊರೆಯುವಿಕೆ, ಪಂಪ್‌ಸೆಟ್ಸ್ ಸರಬರಾಜು ಮತ್ತು ವಿದ್ಯುದ್ದೀಕರಣದ ಠೇವಣಿ ಮೊತ್ತವನ್ನು ಭರಿಸಲಾಗುತ್ತದೆ. ಈ ಯೋಜನೆ ಅಡಿಯಲ್ಲಿ ₹2,00,000 ಸಹಾಯಧನ ನೀಡಲಾಗುತ್ತದೆ. ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ತುಮಕೂರು ಜಿಲ್ಲೆಗೆ ₹3.50 ಲಕ್ಷ ಸಹಾಧನ ನಿಗದಿಪಡಿಸಿದೆ. ಇದರಲ್ಲಿ ₹50,000 ಹಣವನ್ನು ವಿದ್ಯದ್ದೀಕರಣ ವೆಚ್ಚಕ್ಕೆ ಮೀಸಲಿರಿಸಲಾಗಿದೆ.
ಈ ಸೌಲಭ್ಯ ಪಡೆಯ ಬಯಸುವ ಫಲಾನುಭವಿಗಳು ಸಣ್ಣ ಮತ್ತು ಅತಿ ಸಣ್ಣ ರೈತರಾಗಿರಬೇಕು. ಅಂದರೆ ಪ್ರತಿ ಫಲಾನುಭವಿಗೆ 1 ಎಕರೆ 20ಗುಂಟೆ (1 ಎಕರೆ 50ಸೆಂಟ್ಸ್) ಎಕರೆಯಿಂದು 5 ಎಕರೆಯವರೆಗೆ ಕುಷ್ಕಿ ಜಮೀನಿರಬೇಕು ಮತ್ತು ವ್ಯವಸಾಯ ವೃತ್ತಿಯನ್ನೇ ಅವಲಂಬಿಸಿರಬೇಕು. ಅಭ್ಯರ್ಥಿಗಳಿಂದ ಸ್ವಯಂ ಲಿಖಿತ ಅರ್ಜಿ 3 ಭಾವಚಿತ್ರ, ವಾರ್ಷಿಕ ಆದಾಯ ಪ್ರಮಾಣ ಪತ್ರ, ಆಧಾರಕಾರ್ಡ್/ಚುನಾವಣ ಗುರುತಿನ ಚೀಟಿ/ರೇಷನ್ ಕಾರ್ಡ್ ನಕಲು, ಪಹಣಿ, ರೆರ್ಕಾರ್ಡ್ ಆಪ್ ರೈಟ್ಸ್ ಪಡೆದು ಆಯ್ಕೆ ಸಮಿತಿಯಲ್ಲಿ ಮಂಡಿಸಿ ನಿಗದಿಪಡಿಸಿದ ಗುರಿಗೆ ಅನುಗುಣವಾಗಿ ಫಲಾನುಭವಿಗಳನ್ನು ಆಯ್ಕೆ ಮಾಡಲಾಗುವುದು.
ಅರ್ಹತೆಗಳೇನು..?
ಫಲಾನುಭವಿಯು ಮತೀಯ ಅಲ್ಪಸಂಖ್ಯಾತ ವರ್ಗಕ್ಕೆ ಸೇರಿರಬೇಕಿದ್ದು, ರಾಜ್ಯದ ಖಾಯಂ ನಿವಾಸಿಯಾಗಿರಬೇಕು. ಅವರು ಸಣ್ಣ ಮತ್ತು ಅತಿ ಸಣ್ಣ ರೈತರಾಗಿರಬೇಕಿದ್ದು, ವಾರ್ಷಿಕ ಕೌಟುಂಬಿಕ ಆದಾಯ ಗ್ರಾಮೀಣ ಪ್ರದೇಶಗಳಲ್ಲಿ ₹81,000 ಹಾಗೂ ನಗರ ಪ್ರದೇಶಗಳಲ್ಲಿ ₹1.03 ಲಕ್ಷ ಮೀರಿಬಾರದು. ಅರ್ಜಿದಾರರು ‘ಆಧಾರ್’ ಕಾರ್ಡ್, ಚುನಾವಣಾ ಗುರುತಿನ ಚೀಟಿ, ಪಡಿತರ ಚೀಟಿಯನ್ನು ಹೊಂದಿರಬೇಕು ಜೊತೆಗೆ
ಅರ್ಜಿದಾರರ ವಯಸ್ಸು 18 ರಿಂದ 60 ವರ್ಷಗಳ ಮಿತಿಯಲ್ಲಿರಬೇಕು.
ಈ ದಾಖಲಾತಿಗಳು ಅಗತ್ಯ
- ಜಾತಿ ಪ್ರಮಾಣ ಪ್ರತಿ
- ಆದಾಯ ಪ್ರಮಾಣ ಪ್ರತಿ
- ಆಧಾರ್ ಕಾರ್ಡ್ ಪ್ರತಿ
- ಇತ್ತೀಚಿನ ಆರ್.ಟಿ.ಸಿ.
- ಪಡಿತರ ಚೀಟಿ
- ಚುನಾವಣಾ ಗುರುತಿನ ಚೀಟಿ, ಸಣ್ಣ / ಅತಿ ಸಣ್ಣ ಹಿಡುವಳಿದಾರ ದೃಢೀಕರಣ ಪತ್ರ
- ಬ್ಯಾಂಕ್ ಪಾಸ್ ಬುಕ್ ಪ್ರತಿ
- ಭೂ ಕಂದಾಯ ಪಾವತಿಸಿದ ರಸೀದಿ
- ಸ್ವಯಂ ಘೋಷಣಾ ಪತ್ರ
- ಜಾಮೀನುದಾರರ ಸ್ವಯಂ ಘೋಷಣಾ ಪತ್ರ.
ಗಂಗಾ ಕಲ್ಯಾಣ ಯೋಜನೆಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವುದು ಹೇಗೆ?
ಕರ್ನಾಟಕದಲ್ಲಿ ಗಂಗಾ ಕಲ್ಯಾಣ ಯೋಜನೆಗೆ ಆನ್‌ಲೈನ್ ಅರ್ಜಿ ಸಲ್ಲಿಸುವ ಕ್ರಮವನ್ನು ಹಂತ ಹಂತವಾಗಿ ವಿವರಿಸಲಾಗಿದೆ.
- ಹಂತ 1: ಮೊದಲು ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಅಧಿಕೃತ ವೆಬ್‌ಸೈಟ್ https://kmdc.karnataka.gov.in/ ಗೆ ಭೇಟಿ ನೀಡಿ
- ಹಂತ 2: ಮುಖಪುಟದಲ್ಲಿ, “ಆನ್‌ಲೈನ್ ಸರ್ವಿಸಸ್” ಟ್ಯಾಬ್ ಮೇಲೆ ಸ್ಕ್ರಾಲ್ ಮಾಡಿ ಮತ್ತು ಕೆಳಗೆ ತೋರಿಸುವ “ಆನ್‌ಲೈನ್ ಅಪ್ಲಿಕೇಶನ್” ಲಿಂಕ್ ಅನ್ನು ಕ್ಲಿಕ್ ಮಾಡಿ
- ಹಂತ 3: ನಂತರ https://kmdc.karnataka.gov.in/info-3/ONLINE+APPLICATION/kn ನೊಂದಿಗೆ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಆನ್‌ಲೈನ್ ಅಪ್ಲಿಕೇಶನ್ ಪುಟವು ತೆರೆಯುತ್ತದೆ. “ಗಂಗಾ ಕಲ್ಯಾಣ ಯೋಜನೆ – ಅಪ್ಲೈ ಮಾಡಲು ಇಲ್ಲಿ ಕ್ಲಿಕ್ ಮಾಡಿ” ಎಂಬ ಬಟನ್ ಒತ್ತಿರಿ.
- ಹಂತ 4: ನೇರ ಲಿಂಕ್ – https://kmdc.kar.nic.in/loan/Login.aspx
- ಹಂತ 5: ಈ ಮೇಲಿನ ಲಿಂಕ್ ಅನ್ನು ಕ್ಲಿಕ್ ಮಾಡಿದ ನಂತರ, KMDC ಕರ್ನಾಟಕ ಲೋನ್ ಲಾಗಿನ್ ಪುಟವು ಕಾಣಿಸಿಕೊಳ್ಳುತ್ತದೆ
- ಹಂತ 6: ಈ ಪುಟದಲ್ಲಿ, ಕರ್ನಾಟಕ ಗಂಗಾ ಕಲ್ಯಾಣ ಯೋಜನೆ ಆನ್‌ಲೈನ್ ಅರ್ಜಿ ನಮೂನೆಯನ್ನು ತೆರೆಯಲು “ಗಂಗಾ ಕಲ್ಯಾಣ ಯೋಜನೆ” ಲಿಂಕ್ ಅನ್ನು ಕ್ಲಿಕ್ ಮಾಡಿ.
ಅಥವಾ ಸೇವಾ ಸಿಂಧು ಪೋರ್ಟಲ್ (Seva Sindhu Portal) ಮುಖಾಂತರ ಅರ್ಜಿಗಳನ್ನು ಹಾಕಬಹುದಾಗಿದ್ದು, ರೈತರು ಗ್ರಾಮ ಒನ್ ಮತ್ತು ಕರ್ನಾಟಕ ಒನ್ ಸೇವಾಕೇಂದ್ರಗಳಲ್ಲಿ ಅ.20ರೊಳಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.