ರಾಷ್ಟ್ರೀಯ ಗೋಪಾಲ ರತ್ನ ಪ್ರಶಸ್ತಿ’ಗೆ ಅರ್ಜಿ ಆಹ್ವಾನ – ಅರ್ಹ ರೈತರಿಗೆ 2ರಿಂದ 5 ಲಕ್ಷ ರೂ. ನಗದು ಬಹುಮಾನ ; ಅರ್ಜಿ ಸಲ್ಲಿಸಲು ಹೀಗೆ ಮಾಡಿ..

ರಾಷ್ಟ್ರೀಯ ಗೋಪಾಲ ರತ್ನ ಪ್ರಶಸ್ತಿ’ಗೆ ಅರ್ಜಿ ಆಹ್ವಾನ – ಅರ್ಹ ರೈತರಿಗೆ 2ರಿಂದ 5 ಲಕ್ಷ ರೂ. ನಗದು ಬಹುಮಾನ ; ಅರ್ಜಿ ಸಲ್ಲಿಸಲು ಹೀಗೆ ಮಾಡಿ..

ನ್ಯೂಸ್ ‌ಆ್ಯರೋ : ಕೇಂದ್ರದ ಮೀನುಗಾರಿಕೆ, ಪಶು ಸಂಗೋಪನೆ ಮತ್ತು ಹೈನುಗಾರಿಕೆ ಸಚಿವಾಲಯವು 2022ನೇ ಸಾಲಿನ ರಾಷ್ಟ್ರೀಯ ಗೋಪಾಲ ರತ್ನ ಪ್ರಶಸ್ತಿಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. https://awards.gov.in ಪೋರ್ಟಲ್​ನಲ್ಲಿ ಸೆ.30ವರೆಗೆ ಅರ್ಜಿ ಸಲ್ಲಿಸಲು ಅವಕಾಶವಿದ್ದು, ಈ ವರ್ಷದ ‘ರಾಷ್ಟ್ರೀಯ ಕ್ಷೀರ ದಿನ’ವಾದ ನವೆಂಬರ್​ 26ರಂದು ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ.

ಮೂರು ವಿಭಾಗಗಳಲ್ಲಿ ಪ್ರಶಸ್ತಿ

ದೇಶೀಯ ಹಸು/ಎಮ್ಮೆ ತಳಿ ಸಾಕುವ ಉತ್ತಮ ರೈತ, ಉತ್ತಮ ಕೃತಕ ಗರ್ಭಧಾರಣೆ ತಂತ್ರಜ್ಞ ಮತ್ತು ಉತ್ತಮ ಡೇರಿ ಸಹಕಾರಿ ಸಂಘ/ಡೇರಿ ರೈತ ಉತ್ಪಾದನಾ ಸಂಸ್ಥೆ ಎಂಬ ಮೂರು ವಿಭಾಗಗಳಲ್ಲಿ ಪ್ರಶಸ್ತಿ ನೀಡಲಾಗುತ್ತದೆ. ಈ ಮೂರು ವಿಭಾಗಗಳ ಪ್ರಶಸ್ತಿ ಅನುಕ್ರಮವಾಗಿ 5 ಲಕ್ಷ ರೂಪಾಯಿ, 3 ಲಕ್ಷ ರೂಪಾಯಿ ಹಾಗೂ 2 ಲಕ್ಷ ರೂಪಾಯಿ ನಗದು ಬಹುಮಾನ ಒಳಗೊಂಡಿರುತ್ತದೆ.

2014 ಡಿಸೆಂಬರ್ ನಲ್ಲಿ ಮೊದಲ ಬಾರಿಗೆ ರಾಷ್ಟ್ರೀಯ ಗೋಕುಲ್ ಮಿಷನ್ ಅನ್ನು ದೇಶದಲ್ಲಿ ಪ್ರಾರಂಭಿಸಲಾಯಿತು, ವೈಜ್ಞಾನಿಕ ರೀತಿಯಲ್ಲಿ ಸ್ಥಳೀಯ ಗೋವಿನ ತಳಿಗಳನ್ನು ಸಂರಕ್ಷಿಸುವ ಮತ್ತು ಅಭಿವೃದ್ಧಿಪಡಿಸುವ ಉದ್ದೇಶವನ್ನು ಇದು ಒಳಗೊಂಡಿದ್ದು, ಪಶುಸಂಗೋಪನೆ ಮತ್ತು ಹೈನುಗಾರಿಕೆ ಇಲಾಖೆಯು ರೈತರಿಗೆ ಸುಸ್ಥಿರ ಜೀವನೋಪಾಯವನ್ನು ಒದಗಿಸಲು ಎಲ್ಲಾ ಪ್ರಯತ್ನಗಳನ್ನು ಮಾಡುವಲ್ಲಿ ಕಾರ್ಯನಿರತವಾಗಿದೆ.

ಹೈನುಗಾರಿಕೆಯಲ್ಲಿ, ಡೈರಿ ಉದ್ಯಮದಲ್ಲಿ ಮಹತ್ವದ ಸಾಧನೆ ಮಾಡಿದವರಿಗೆ ಈ ಪ್ರಶಸ್ತಿಯನ್ನು ನೀಡಲಾಗುತ್ತದೆ. ಗೋಪಾಲ ರತ್ನ ಪ್ರಶಸ್ತಿಯು ಹೊಸ ಮಾನದಂಡಗಳನ್ನು ಹೊಂದಿಸಲಿದೆ ಮತ್ತು ಉತ್ತಮ ಅಭ್ಯಾಸಗಳು ಮತ್ತು ನಾವೀನ್ಯತೆಯನ್ನು ಅಳವಡಿಸಿಕೊಳ್ಳಲು ಸಹಾಯ ಮಾಡುತ್ತದೆ.

ಅರ್ಹತೆಗಳೇನು..?

ಸರ್ಕಾರದ ಈ ಯೋಜನೆಯಡಿಯಲ್ಲಿ ಹಸು ಮತ್ತು ಎಮ್ಮೆಗಳನ್ನು ಸಾಕುವ ರೈತರು ಮಾತ್ರ ಅರ್ಹರಾಗಿದ್ದು, ಇದನ್ನು ಹೊರತುಪಡಿಸಿ 50 ಪ್ರಮಾಣೀಕೃತ ಸ್ಥಳೀಯ ತಳಿಯ ಹಸು ಅಥವಾ 17 ದೇಶಿ ಪ್ರಮಾಣೀಕೃತ ತಳಿ ಎಮ್ಮೆಗಳಲ್ಲಿ ಯಾವುದಾದರೂ ಒಂದನ್ನು ಸಾಕುವವರು ಮಾತ್ರ ಈ ಪ್ರಶಸ್ತಿಗೆ ಅರ್ಜಿ ಸಲ್ಲಿಸಬಹುದು.

ದಿನಕ್ಕೆ 100 ಲೀಟರ್ ಹಾಲು ಉತ್ಪಾದಿಸುವ ಮತ್ತು ಕನಿಷ್ಠ 50 ರೈತ ಸದಸ್ಯರನ್ನು ಹೊಂದಿರುವ ಸಹಕಾರ ಸಂಘ, ಎಂಪಿಸಿ ಅಥವಾ ಎಫ್‌ಪಿಒ ಹಾಲು ಉತ್ಪಾದಕ ಕಂಪನಿಗಳು ಹಾಲು ಉತ್ಪಾದನಾ ಕ್ಷೇತ್ರದಲ್ಲಿ ಕೊಡುಗೆ ನೀಡಲು ಅರ್ಹರಾಗಿರುತ್ತಾರೆ .

ಅರ್ಜಿಗಳನ್ನು ಸಲ್ಲಿಸಲು ಸೆ.30 ಕೊನೆಯ ದಿನಾಂಕವಾಗಿದ್ದು, ನವೆಂಬರ್ 26 ರಂದು ರಾಷ್ಟ್ರೀಯ ಹಾಲು ದಿನಾಚರಣೆಯ ಸಂದರ್ಭದಲ್ಲಿ ಪ್ರಶಸ್ತಿಗಳನ್ನು ನೀಡಲಾಗುತ್ತದೆ.

Related post

ಯುವಕರೇ ಗಮನಿಸಿ‌ : ಕಡಿಮೆ ಬಂಡವಾಳವಿದ್ರೂ ಈ ಕೃಷಿ ಉದ್ಯಮಗಳಿಂದ ಲಕ್ಷಗಟ್ಟಲೆ ಲಾಭ ಗಳಿಸಬಹುದು – ಟಾಪ್ 10 ಉದ್ಯಮಗಳ ಮಾಹಿತಿ ಇಲ್ಲಿವೆ ನೋಡಿ…

ಯುವಕರೇ ಗಮನಿಸಿ‌ : ಕಡಿಮೆ ಬಂಡವಾಳವಿದ್ರೂ ಈ ಕೃಷಿ ಉದ್ಯಮಗಳಿಂದ ಲಕ್ಷಗಟ್ಟಲೆ…

ನ್ಯೂಸ್ ಆ್ಯರೋ : ಯಾವುದೇ ಲಾಭದಾಯಕ ವ್ಯವಹಾರ ಮಾಡುವುದರಿಂದ ಹಣಕಾಸಿನ ಸಮಸ್ಯೆಗಳನ್ನು ದೂರ ಮಾಡಬಹುದು. ಆದರೆ ವ್ಯಾಪಾರ ಕೈಹಿಡಿಯುವುದು ತುಂಬಾನೇ ಕಷ್ಟ.…
ಅಡಿಕೆ ಬೆಳೆಗಾರರಿಗೆ ಸುಗ್ಗಿ, ಹೊಸ ಅಡಿಕೆಗೆ ಹೆಚ್ಚಿದ ಬೇಡಿಕೆ – ಹೊಸ ಅಡಿಕೆ ದರ ಇನ್ನಷ್ಟು ಏರುವ ನಿರೀಕ್ಷೆ..!!

ಅಡಿಕೆ ಬೆಳೆಗಾರರಿಗೆ ಸುಗ್ಗಿ, ಹೊಸ ಅಡಿಕೆಗೆ ಹೆಚ್ಚಿದ ಬೇಡಿಕೆ – ಹೊಸ…

ನ್ಯೂಸ್ ಆ್ಯರೋ‌ : ಉತ್ತರ ಭಾರತದ ಅಡಿಕೆ ವ್ಯಾಪಾರಿಗಳು ದರ ನೋಡಿ ಖರೀದಿಸುತ್ತಿದ್ದು, ಹಳೆ ಅಡಿಕೆ ಬದಲು ಹೊಸ ಅಡಿಕೆಯತ್ತ ಮುಖ…

Leave a Reply

Your email address will not be published. Required fields are marked *