- ಹವಾಮಾನ ವರದಿ
- April 5, 2022
- No Comment
- 680
ಹವಾಮಾನ ವರದಿ 05-04-2022 । ಕರ್ನಾಟಕದ ವಿವಿಧೆಡೆ ಮಳೆಯಾಗುವ ಸಾಧ್ಯತೆ

06.04.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕೃಷಿ ಲೋಕ: ಕೊಡಗು, ಆಗುಂಬೆ, ಶೃಂಗೇರಿ ಸುತ್ತಮುತ್ತ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜೆಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ಬೆಳಗಾವಿ, ಧಾರವಾಡ, ಹಾವೇರಿ, ದಾವಣಗೆರೆ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಮೈಸೂರು, ಚಾಮರಾಜನಗರ ಜಿಲ್ಲೆಗಳ ಒಂದೆರಡು ಕಡೆ ಮಳೆಯ ಸಾಧ್ಯತೆ ಇದೆ.
ಉಳಿದ ಕರ್ನಾಟಕದ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.

ವಾಯುಭಾರ ಕುಸಿತ : ವಾಯುಭಾರ ಕುಸಿತದ ಆರಂಭಿಕ ಹಂತಕ್ಕೆ ವೇದಿಕೆ ಸಜ್ಜಾಗಿದ್ದು, ನಾಳೆ ನಾಡಿದ್ದಲ್ಲಿ ಅಂಡಮಾನ್ ಪಶ್ಚಿಮ ಕರಾವಳಿಯಲ್ಲಿ ತಿರಿಗುವಿಕೆಯ ಸ್ಪಷ್ಟ ಚಿತ್ರಣ ಸಿಗಲಿದೆ.