- ಹವಾಮಾನ ವರದಿ
- April 1, 2022
- No Comment
- 1069
ಹವಾಮಾನ ವರದಿ 01-04-2022 | ಕರ್ನಾಟಕದ ವಿವಿಧೆಡೆ ಇಂದು ಮಳೆಯಾಗುವ ಸಾಧ್ಯತೆ

02.04.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕೃಷಿ ಲೋಕ: ನಿನ್ನೆ ಕೊಡಗು ಹಾಗೂ ಆಗುಂಬೆ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದ್ದರೂ ಎಲ್ಲಿಯೂ ಅಂತಹ ಮಳೆಯಾಗಿಲ್ಲ.
ಇವತ್ತು ಸಹ ಕೊಡಗು ಹಾಗೂ ಆಗುಂಬೆ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ.
ಕಾಸರಗೋಡು ಸೇರಿದಂತೆ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ಹಾವೇರಿಯ ಒಂದೆರಡು ಕಡೆ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಮೈಸೂರು, ಜಿಲ್ಲಾ ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ಉಳಿದ ಕರ್ನಾಟಕದ ಭಾಗಗಳಲ್ಲಿ ಅಲ್ಲಲ್ಲಿ ಮೋಡ ಅಥವಾ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ.