- ಹವಾಮಾನ ವರದಿ
- March 21, 2022
- No Comment
- 1570
ಹವಾಮಾನ ವರದಿ : ದಿನಾಂಕ 21-03-2022 ಮತ್ತಷ್ಟು ತೀವ್ರಗೊಂಡ ವಾಯುಭಾರ ಕುಸಿತ, ಚಂಡಮಾರುತ ಸಾಧ್ಯತೆ

22.03.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕೃಷಿ ಲೋಕ: ಕೊಡಗು ಹಾಗೂ ಆಗುಂಬೆ, ಶಿೃಂಗೇರಿ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ.
ದಕ್ಷಿಣ ಕನ್ನಡ ಮತ್ತು ಕಾಸರಗೋಡು ಹೆಚ್ಚಿನ ಭಾಗಗಳಲ್ಲಿ, ಉಡುಪಿ ಜಿಲ್ಲೆಯ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.

ತೀರ್ಥಹಳ್ಳಿ, ಹೊಸನಗರ ಸುತ್ತಮುತ್ತ ಭಾಗಗಳಲ್ಲಿಯೂ ಮಳೆಯ ಮುನ್ಸೂಚನೆ ಇದೆ.
ಮೈಸೂರು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಅಲ್ಲಲ್ಲಿ, ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ದಾವಣಗೆರೆ ಜಿಲ್ಲೆಯ ಒಂದೆರಡು ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ.
ಉತ್ತರ ಕನ್ನಡ, ಹಾವೇರಿ, ಧಾರವಾಡ, ಬೆಳಗಾವಿ ಜಿಲ್ಲೆಗಳಲ್ಲಿ ಮೋಡ ಅಥವಾ ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಯೂ ಇದೆ.
ಉಳಿದ ಕರ್ನಾಟಕದ ಭಾಗಗಳಲ್ಲಿ ಮೋಡ ಕವಿದ ವಾತಾಹರಣ ಇರಲಿದ್ದು ಒಂದೆರಡು ಕಡೆ ತುಂತುರು ಮಳೆಯ ಬೀಳುವ ಸಾಧ್ಯತಹೆ ಇದೆ.

ವಾಯುಭಾರ ಕುಸಿತ :
ಈಗಾಗಲೇ ಉತ್ತರ ಅಂಡಮಾನ್ ಬಳಿಯ ಸಮುದ್ರದಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಸೋಮವಾರ ಮತ್ತಷ್ಟು ತೀವ್ರತೆ ಪಡೆದಿದ್ದು, ಉತ್ತರ- ಈಶಾನ್ಯಕ್ಕೆ ಗಂಟೆಗೆ 12 ಕಿಲೋ ಮೀಟರ್ ವೇಗದಲ್ಲಿ ಚಲಿಸುತ್ತಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಸೋಮವಾರ ಸಂಜೆಯ ವೇಳೆಗೆ ಚಂಡಮಾರುತವಾಗಿ ಮತ್ತಷ್ಟು ತೀವ್ರತೆ ಪಡೆದುಕೊಳ್ಳುವ ಸಾಧ್ಯತೆ ಇದೆ. ಮುಂದಿನ 48 ಗಂಟೆಗಳಲ್ಲಿ ಇದು ಮ್ಯಾನ್ಮಾರ್ ಕರಾವಳಿಗೆ ಕಡೆಗೆ ಉತ್ತರಕ್ಕೆ ಚಲಿಸುವ ಸಾಧ್ಯತೆ ಇದೆ.

ಮೂಲತಃ ಕೃಷಿಕರಾಗಿದ್ದು,, ಪದವೀಧರರಾಗಿರುವ ಇವರು ಶೇರ್ ಬ್ರೋಕರ್ ಆಗಿ ಕಾರ್ಯ ನಿರ್ವಹಿಸಿದ್ದಾರೆ. ಹವಾಮಾನ ಅಭ್ಯಸಿಸುವುದು ಇವರ ಹವ್ಯಾಸ. ಇವರ ಹವಾಮಾನ ವರದಿಯನ್ನು ನಿತ್ಯವೂ ಕೃಷಿಲೋಕ.ಕಾಮ್ ನಲ್ಲಿ ನೋಡಬಹುದಾಗಿದೆ.
? +917026170040