- ಹವಾಮಾನ ವರದಿ
- April 6, 2022
- No Comment
- 535
ಹವಾಮಾನ ವರದಿ 06-04-2022 । ಕರಾವಳಿ ಜೆಲ್ಲೆಗಳಾದ್ಯಂತ ಮಳೆಯ ಮುನ್ಸೂಚನೆ

07.04.22ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆ :
ಕೃಷಿ ಲೋಕ: ಕೊಡಗು, ಆಗುಂಬೆ, ಶಿೃಂಗೇರಿ, ತೀರ್ಥಹಳ್ಳಿ, ಹೊಸನಗರ, ಸಾಗರ ಸುತ್ತಮುತ್ತ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜೆಲ್ಲೆಗಳಾದ್ಯಂತ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ಬೆಳಗಾವಿ, ಧಾರವಾಡ, ಹಾವೇರಿ, ದಾವಣಗೆರೆ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಮೈಸೂರು, ಚಾಮರಾಜನಗರ, ಮಂಡ್ಯ ಜಿಲ್ಲಾ ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ರಾಜ್ಯದ ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಮೋಡ ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆ ಇದೆ.

ವಾಯುಭಾರ ಕುಸಿತ : ಇನ್ನೆರಡು ದಿನಗಳಲ್ಲಿ ಬಂಗಾಳಕೂಲ್ಲಿಯಲ್ಲಿ ಉಂಟಾಗಲಿರುವ ವಾಯುಭಾರ ಕುಸಿತವು ನಿರೀಕ್ಷಿತ ಮಟ್ಟದಲ್ಲಿ ಪ್ರಭಾವಿತವಾಗಿರುವುದಿಲ್ಲ ಹಾಗೂ ಚಂಡಮಾರುತವಾಗಿ ಮಾರ್ಪಾಡುವ ಸಾಧ್ಯತೆಯೂ ಕಡಿಮೆ ಇರಬಹುದು.