- ಹವಾಮಾನ ವರದಿ
- April 14, 2022
- No Comment
- 1752
ಹವಾಮಾನ ವರದಿ 14-04-2022 । ವಾಯುಭಾರ ಕುಸಿತ ಹಿನ್ನೆಲೆ ಇನ್ನು ಮೂರೂ ದಿನಗಳ ಕಾಲ ಮಳೆ ಸಾಧ್ಯತೆ

15.04.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕೃಷಿ ಲೋಕ: ಕೊಡಗು ಅಲ್ಲಲ್ಲಿ, ಆಗುಂಬೆ ಸುತ್ತಮುತ್ತ, ತುಮಕೂರು ಜಿಲ್ಲೆಯ ಹೆಚ್ಚಿನ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ.
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜೆಲ್ಲೆಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಮೈಸೂರು, ಚಾಮರಾಜನಗರ, ರಾಮನಗರ, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ಪಾವಗಢ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ಧಾರವಾಡ, ಬೆಳಗಾವಿ ಜಿಲ್ಲೆಗಳ ಒಂದೆರಡು ಕಡೆ ಮಳೆಯ ಸಾಧ್ಯತೆ ಇದೆ.
ಉಳಿದ ಕರ್ನಾಟಕದ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.
ವಾಯುಭಾರ ಕುಸಿತ : ಅರಬ್ಬಿ ಸಮುದ್ರದ ಕೇರಳ ಕರಾವಳಿ ಹತ್ತಿರ ಸಣ್ಣ ಪ್ರಮಾಣದ ವಾಯುಭಾರ ಕುಸಿತದಂತಹ ತಿರುಗುವಿಕೆ ಉಂಟಾಗಿದೆ. ಇದರ ಪ್ರಭಾವದಿಂದ ಕರಾವಳಿಯಾದ್ಯಂತ ಇನ್ನೂ 2 ರಿಂದ 3 ದಿವಸಗಳ ಮಟ್ಟಿಗೆ ಇದೇ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.

ಮೂಲತಃ ಕೃಷಿಕರಾಗಿದ್ದು,, ಪದವೀಧರರಾಗಿರುವ ಇವರು ಶೇರ್ ಬ್ರೋಕರ್ ಆಗಿ ಕಾರ್ಯ ನಿರ್ವಹಿಸಿದ್ದಾರೆ. ಹವಾಮಾನ ಅಭ್ಯಸಿಸುವುದು ಇವರ ಹವ್ಯಾಸ. ಇವರ ಹವಾಮಾನ ವರದಿಯನ್ನು ನಿತ್ಯವೂ ಕೃಷಿಲೋಕ.ಕಾಮ್ ನಲ್ಲಿ ನೋಡಬಹುದಾಗಿದೆ.
? +917026170040