- ಹವಾಮಾನ ವರದಿ
- March 16, 2022
- No Comment
- 2138
ಹವಾಮಾನ ವರದಿ – ದಿನಾಂಕ 16/03/2022

ಕೃಷಿಲೋಕ: 17.02.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕೊಡಗು, ಕಾಸರಗೋಡು, ದಕ್ಷಿಣ ಕನ್ನಡದ ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಮೈಸೂರು, ಚಾಮರಾಜನಗರ, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಉಳಿದ ಕರ್ನಾಟಕದ ಭಾಗಗಳಲ್ಲಿ ಅಲ್ಲಲ್ಲಿ ಹಗುರವಾಗಿ ಮೋಡ ಇದ್ದರೂ ಒಣ ಹವೆ ಮುಂದುವರಿಯಲಿದೆ.
ಬಂಗಾಳಕೊಲ್ಲಿಯ ದಕ್ಷಿಣ ಭಾಗದಲ್ಲಿ ವಾಯುಭಾರ ಕುಸಿತ ಉಂಟಾಗುವ ಲಕ್ಷಣಗಳಿದ್ದು, ಇನ್ನೆರಡು ದಿನಗಳಲ್ಲಿ ಸ್ಪಷ್ಟತೆ ಲಭ್ಯವಾಗಬಹುದು. ಈಗಿನ ಪಥದಂತೆ ವಾಯುಭಾರ ಕುಸಿತವು ಮತ್ತಷ್ಟು ಪೂರ್ವದ ಕಡೆ ಚಲಿಸುವ ಲಕ್ಷಣಗಳಿರುವುದರಿಂದ ಕರ್ನಾಟಕಕ್ಕೆ ಯಾವುದೇ ಪರಿಣಾಮವಿಲ್ಲ.
ಈಗಿನ ಮುನ್ಸೂಚನೆಯಂತೆ ಮಾರ್ಚ್ 20ರಿಂದ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.

ಮೂಲತಃ ಕೃಷಿಕರಾಗಿದ್ದು,, ಪದವೀಧರರಾಗಿರುವ ಇವರು ಶೇರ್ ಬ್ರೋಕರ್ ಆಗಿ ಕಾರ್ಯ ನಿರ್ವಹಿಸಿದ್ದಾರೆ. ಹವಾಮಾನ ಅಭ್ಯಸಿಸುವುದು ಇವರ ಹವ್ಯಾಸ. ಇವರ ಹವಾಮಾನ ವರದಿಯನ್ನು ನಿತ್ಯವೂ ಕೃಷಿಲೋಕ.ಕಾಮ್ ನಲ್ಲಿ ನೋಡಬಹುದಾಗಿದೆ.
? +917026170040