- ಹವಾಮಾನ ವರದಿ
- March 19, 2022
- No Comment
- 1693
ಹವಾಮಾನ ವರದಿ : ದಿನಾಂಕ 19-03-2022 | ದ.ಕ, ಉಡುಪಿ & ಕಾಸರಗೋಡು ಜಿಲ್ಲೆಗಳಲ್ಲಿ ಮಳೆಯಾಗುವ ನಿರೀಕ್ಷೆ

ಕೃಷಿಲೋಕ : ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಇಂದು ಮಳೆಯ ಮುನ್ಸೂಚನೆ ಇದೆ.
ಅಲ್ಲದೇ ಕಾಸರಗೋಡು ಸೇರಿದಂತೆ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ.
ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ದಾವಣಗೆರೆ ಹಾಗೂ ಹಾವೇರಿ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ಧಾರವಾಡ, ಬೆಳಗಾವಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಈಗಾಗಲೇ ಮೋಡದ ವಾತಾವರಣ ಇದೆ. ಒಂದೆರಡು ಕಡೆ ಮಳೆಯ ಸಾಧ್ಯತೆಯೂ ಇದೆ. ಮಧ್ಯಾಹ್ನ ದ ನಂತರ ಮೋಡ ಚದುರಲು ಆರಂಭವಾಗಬಹುದು.
ಉಳಿದ ಕರ್ನಾಟಕದ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣ ಇರಬಹುದು.

ವಾಯುಭಾರ ಕುಸಿತ : ನಿಕೋಬಾರ್ ಕರಾವಳಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಅಂಡಮಾನ್ ಕರಾವಳಿ ಮೂಲಕ ಚಲಿಸಿ ಮಾರ್ಚ್ 22ನೇ ತಾರೀಕು ಮಧ್ಯಾಹ್ನ ಮೇಲೆ ಬರ್ಮಾ (ಮಯನ್ಮಾರ್) ಕರಾವಳಿಗೆ ಅಪ್ಪಳಿಸುವ ಮುನ್ಸೂಚನೆ ಇದೆ.

ಮೂಲತಃ ಕೃಷಿಕರಾಗಿದ್ದು,, ಪದವೀಧರರಾಗಿರುವ ಇವರು ಶೇರ್ ಬ್ರೋಕರ್ ಆಗಿ ಕಾರ್ಯ ನಿರ್ವಹಿಸಿದ್ದಾರೆ. ಹವಾಮಾನ ಅಭ್ಯಸಿಸುವುದು ಇವರ ಹವ್ಯಾಸ. ಇವರ ಹವಾಮಾನ ವರದಿಯನ್ನು ನಿತ್ಯವೂ ಕೃಷಿಲೋಕ.ಕಾಮ್ ನಲ್ಲಿ ನೋಡಬಹುದಾಗಿದೆ.
? +917026170040