- ಹವಾಮಾನ ವರದಿ
- March 30, 2022
- No Comment
- 779
ಹವಾಮಾನ ವರದಿ 30-03-2022 | ಕೊಡಗು ಹಾಗೂ ಆಗುಂಬೆ ಸುತ್ತಮುತ್ತ ಮಳೆಯ ಮುನ್ಸೂಚನೆ

ಕೃಷಿ ಲೋಕ:31.03.22ಲ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕೊಡಗು ಹಾಗೂ ಆಗುಂಬೆ ಸುತ್ತಮುತ್ತ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ.
ಕಾಸರಗೋಡು, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಸಂಜೆ ಮೋಡ, ಧರ್ಮಸ್ಥಳ, ಕಾರ್ಕಳ, ಸುಬ್ರಮಣ್ಯ ಹಾಗೂ ಸುಳ್ಯ ಸುತ್ತಮುತ್ತ ಒಂದೆರಡು ಕಡೆ ಮಳೆಯ ಮುನ್ಸೂಚನೆ ಇದೆ.
ಶಿವಮೊಗ್ಗ, ಚಿಕ್ಕಮಗಳೂರು, ದಾವಣಗೆರೆ, ಹಾಸನ, ಮೈಸೂರು ಭಾಗಗಳಲ್ಲಿ ಅಲ್ಲಲ್ಲಿ ಸಾಧಾರಣ ಮಳೆಯ ಮುನ್ಸೂಚನೆ ಇದೆ.
ಉಳಿದ ಕರ್ನಾಟಕದ ಭಾಗಗಳಲ್ಲಿ ಸಂಜೆ ಮೋಡ ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಯೂ ಇದೆ.