- ಹವಾಮಾನ ವರದಿ
- May 17, 2022
- No Comment
- 1296
ಹವಾಮಾನ ವರದಿ 17-05-2022 | ರಾಜ್ಯದ ಕರಾವಳಿ ಭಾಗಗಳಲ್ಲಿ ಭಾರಿ ಮಳೆಯ ಮುನ್ಸೂಚನೆ

18.05.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕೃಷಿ ಲೋಕ: ಮಧ್ಯ ಕೇರಳ ಕಡಲ ತೀರದಲ್ಲಿ ವಾಯುಭಾರ ಕುಸಿತದಂತಹ ತಿರುಗುವಿಕೆ ಉಂಟಾದ ಕಾರಣ ಕೇರಳದ ಹೆಚ್ಚಿನ ಭಾಗಗಳಲ್ಲಿ ಭಾರಿ ಮಳೆಯ ಮುನ್ಸೂಚನೆ ಇದೆ. ಇದರ ಪ್ರಭಾವದಿಂದ ದಕ್ಷಿಣ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ.

ಕಾಸರಗೋಡು, ದಕ್ಷಿಣ ಕನ್ನಡ, ಉಡುಪಿ, ಚಾಮರಾಜನಗರ, ಬೆಂಗಳೂರು, ರಾಮನಗರ, ತುಮಕೂರು ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ.
ಉತ್ತರ ಕನ್ನಡ, ಹಾಸನ, ಕೊಡಗು, ಮೈಸೂರು, ಮಂಡ್ಯ, ಕೋಲಾರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ, ಪಾವಗಡ ದಲ್ಲಿ ಸಹ ಮಳೆಯ ಮುನ್ಸೂಚನೆ ಇದೆ.

ಹಾವೇರಿ, ಧಾರವಾಡ, ಬೆಳಗಾವಿ, ಬಾಗಲಕೋಟೆ, ವಿಜಯಪುರ, ಗದಗ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ, ಬೀದರ್ ಹಾಗೂ ಗುಲ್ಬರ್ಗ ಜಿಲ್ಲೆಗಳ ಅಲ್ಲಲ್ಲಿ ಸಾಧಾರಣ ಮಳೆಯ ಮುನ್ಸೂಚನೆ ಇದೆ.
ಈ ವಾತಾವರಣವು ಮೇ 19ರ ತನಕ ಇರಲಿದ್ದು ನಂತರ ಕರಾವಳಿ ಸೇರಿದಂತೆ ರಾಜ್ಯದಲ್ಲಿ ಮಳೆ ಕಡಿಮೆ ಆಗುವ ಮುನ್ಸೂಚನೆ ಇದೆ. ಈಗಿನ ಈ ವಿದ್ಯಮಾನದಿಂದ ಮತ್ತೆ ಮುಂಗಾರು ಆರಂಭವಾಗುವ ಸಮಯ ವ್ಯತ್ಯಾಸವಾಗುವ ಸಾಧ್ಯತೆ ಹೆಚ್ಚಿದೆ.