- ಹವಾಮಾನ ವರದಿ
- April 21, 2022
- No Comment
- 704
ಹವಾಮಾನ ವರದಿ 21-04-2022 | ಕರ್ನಾಟಕದ ವಿವಿಧೆಡೆ ಮಳೆಯ ಮುನ್ಸೂಚನೆ

22.04.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕೃಷಿ ಲೋಕ: ಕೊಡಗು ಅಲ್ಲಲ್ಲಿ, ಆಗುಂಬೆ, ಹೊಸನಗರ, ಸಾಗರ, ಸಿದ್ದಾಪುರ ಸುತ್ತಮುತ್ತ ಪ್ರದೇಶಗಳಲ್ಲಿ ಮಳೆಯ ಮುನ್ಸೂಚನೆ ಇದೆ.
ದಕ್ಷಿಣ ಕನ್ನಡದ, ಸುಳ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳಲ್ಲಿ ಒಂದೆರಡು ಪ್ರದೇಶಗಳಲ್ಲಿ ಸಾಧಾರಣ ಮಳೆಯ ಸಾಧ್ಯತೆ ಇದೆ.
ಬೆಳಗಾವಿ, ಧಾರವಾಡ, ಹಾವೇರಿ, ಬಾಗಲಕೋಟೆ, ಶಿವಮೊಗ್ಗ, ಚಿಕ್ಕಮಗಳೂರು, ದಾವಣಗೆರೆ, ಚಿತ್ರದುರ್ಗ, ಗದಗ, ಕೊಪ್ಪಳ, ಬಳ್ಳಾರಿ, ರಾಯಚೂರು, ವಿಜಾಪುರ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ಉಳಿದ ಕರ್ನಾಟಕದ ಭಾಗಗಳಲ್ಲಿ ಅಲ್ಲಲ್ಲಿ ಮೋಡ ಅಥವಾ ತುಂತುರು ಮಳೆಯ ಮುನ್ಸೂಚನೆ ಇದೆ.