- ಹವಾಮಾನ ವರದಿ
- April 23, 2022
- No Comment
- 1101
ರಾಜ್ಯದಲ್ಲಿ ಇನ್ನು 2 ದಿನ ವರುಣನ ಆರ್ಭಟ, ಯಲ್ಲೋ ಅಲರ್ಟ್ ಘೋಷಣೆ | ಹವಾಮಾನ ವರದಿ 23-04-2022

ಕೃಷಿ ಲೋಕ: ರಾಜ್ಯದಲ್ಲಿ ಇನ್ನು 2 ದಿನ ವರುಣನ ಆರ್ಭಟ ಇರಲಿದೆ. ಉತ್ತರ ಒಳನಾಡು, ದಕ್ಷಿಣ ಒಳನಾಡು ಮತ್ತು ಕರಾವಳಿ ಬಾಗದಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಕರ್ನಾಟಕದ ಬಹುತೇಕ ರಾಜ್ಯದಲ್ಲಿ ಇಂದು ಎಲ್ಲೊ ಅಲರ್ಟ್ ಘೋಷಣೆ ಮಾಡಲಾಗಿದೆ. ವಿಜಯಪುರ, ಬೀದರ್, ಬೆಳಗಾವಿ, ಕಲುಬುರಗಿ, ಬಾಗಲಕೋಟೆ ಮತ್ತು ಧಾರವಾಡದಲ್ಲಿ ಇಂದು ಯಲ್ಲೋ ಅಲರ್ಟ್ ಘೋಷಿಸಲಾಗಿದೆ.
ನಿನ್ನೆ ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದಂತಹ ತಿರುಗುವಿಕೆ ಉಂಟಾಗಿದ್ದದರಿಂದ ದಕ್ಷಿಣ ಕನ್ನಡದ ಹೆಚ್ಚಿನ ಭಾಗಗಳಲ್ಲಿ ಅನಿರೀಕ್ಷಿತವಾಗಿ ಉತ್ತಮ ಮಳೆಯಾಗಿದೆ.
ಕೊಡಗು ಹಾಗೂ ಆಗುಂಬೆ ಭಾಗಗಳಲ್ಲಿ ಇವತ್ತು ಸಹ ಮಳೆಯ ಮುನ್ಸೂಚನೆ ಇದೆ. ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜೆಲ್ಲೆಗಳಾದ್ಯಂತ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ಚಂಡಮಾರುತ ಹಿನ್ನೆಲೆ : ತಮಿಳುನಾಡು, ತೆಲಂಗಾಣದಲ್ಲಿ ಚಂಡಮಾರುತ ಎದ್ದಿರುವ ಹಿನ್ನೆಲೆ ರಾಜ್ಯದಲ್ಲಿ ಇನ್ನೂ 2 ದಿನ ಮಳೆಯಾಗುವ ಸಾದ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ತಿಳಿಸಿದೆ.